ಅಲಹಾಬಾದ್: ಜ್ಞಾನವಾಪಿ ಮಸೀದಿಯೊಳಗಿನ ದೇವರಿಗೆ ಪೂಜೆ ಸಲ್ಲಿಸುವ ಕುರಿತಂತೆ ನ್ಯಾಯಾಲಯ ಮಹತ್ವದ ಆದೇಶ ಪ್ರಕಟಿಸಿದೆ. ಮಸೀದಿ ಆವರಣದಲ್ಲಿರುವ ಒಂದು ನೆಲಮಾಳಿಗೆ ವಿಭಾಗದಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಅಲಹಾಬಾದ್ ಹೈಕೋರ್ಟ್ಅವಕಾಶ ಕಲ್ಪಿಸಿದೆ.
ಈ ಕುರಿತಂತೆ ವಾರಾಣಸಿ ಜಿಲ್ಲಾ ನ್ಯಾಯಾಲಯ ಈ ಹಿಂದೆ ಅನುಮತಿ ನೀಡಿರುವ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ.
ಹಿಂದೂಗಳಿಗೆ ಪೂಜೆ ಸಲ್ಲಿಸುವ ಅವಕಾಶ ಕಲ್ಪಿಸಿದ್ದ ವಾರಾಣಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.