ಬೆಂಗಳೂರು: ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆನ್ನಲಾದ ಬೆಳವಣಿಗೆ ಬಗ್ಗೆ ಪ್ರತಿಪಕ್ಷಗಳು ಆಕ್ರೋಶ ಹೊರಹಾಕಿವೆ.
ಸಾಹಿತ್ಯ ಸಮ್ಮೇಳನದಲ್ಲಿ ಕೇಂದ್ರ ಬಿಜೆಪಿ ಸರ್ಕಾರವನ್ನು ದುರ್ಯೋಧನ ಎಂದು ಟೀಕಿಸಿದ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ.
ಈ ಸಂಬಂಧ ಟ್ವೀಟ್ ಮಾಡಿ ಸರ್ಕಾರದ ವಿರುದ್ದ ಕಿಡಿ ಕಾರಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಠಾಣೆಗೆ ಕರೆದು ವಿಚಾರಣೆ ನಡೆಸಿದ ಪೊಲೀಸರ ಕೃತ್ಯ ಖಂಡನೀಯ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರ ತಮ್ಮದು ‘ದುರ್ಯೋದನ ಸರ್ಕಾರ’ ಎಂದು ಸಾಬೀತುಪಡಿಸಿದೆ ಎಂದು ಟೀಕಿಸಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಹೊರಟಿರುವ ಬಿ.ಎಸ್.ಯಡಿಯೂರಪ್ಪ ಅವರ ಗೋಮುಖವ್ಯಾಘ್ರ ಮುಖ ಬಯಲಾಗಿದೆ ಎಂದವರು ವಿಶ್ಲೇಷಣೆ ಮಾಡಿದ್ದಾರೆ.
https://mobile.twitter.com/siddaramaiah/status/1352617958976065536