ಬೆಂಗಳೂರು: ರಾಜಧಾನಿ ಬೆಂಗಳೂರಿನ ಕುಂದನಹಳ್ಳಿ ಗೇಟ್ ಬಳಿ ಅಂಗಡಿಯೊಂದಕ್ಕೆ ನುಗ್ಗಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆಂಬ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಈ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ಘಟನೆಯಲ್ಲಿ ದಾಳಿಗೊಳಗಾದ ಯುವಕರು ಉಡುಪಿ ಜಿಲ್ಲೆ ಬೈಂದೂರು ಮೂಲದವರೆನ್ನಲಾಗಿದೆ. ಈ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಬೆಂಗಳೂರಿನಲ್ಲಿ ಬೈಂದೂರಿನ ಹುಡುಗರ ಮೇಲೆ ಹಲ್ಲೆ ನಡೆಸಿದವರಿಗೆ ಕಠಿಣ ಶಿಕ್ಷೆ ಕೊಡಿಸಿಯೇ ಸಿದ್ದ ಎಂದಿದ್ದಾರೆ. ಈ ವಿಚಾರದಲ್ಲಿ ಸ್ಥಳೀಯ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆಂಬ ಮಾಹಿತಿಯನ್ನು ಶಾಸಕರ ಸುಕುಮಾರ್ ಶೆಟ್ಟಿ ಅವರು ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
Police were refused to register a case Until MLA ask them to do so.
This is how our system works. pic.twitter.com/kK9ixp3Vwr
— Prashanth🇮🇳 (@Prashanthbmw) December 9, 2022




















































