ನವದೆಹಲಿ: ಸ್ವಾತಂತ್ರ್ಯ ದಿನದ ಅಂಗವಾಗಿ ಈ ಬಾರಿಯೂ ‘ಹರ್ ಘರ್ ತಿರಂಗಾ’ ಅಭಿಯಾನ ನಡೆಯಲಿದೆ. ಇಂದಿನಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ ‘ಹರ್ ಘರ್ ತಿರಂಗಾ’ ಅಭಿಯಾನ ನಡೆಯಲಿದೆ.
ಹರ್ ಘರ್ ತಿರಂಗಾ’ ಅಭಿಯಾನದ 3ನೇ ಆವೃತ್ತಿ ಇದಾಗಿದ್ದು ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂದು ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ಹರ್ ಘರ್ ತಿರಂಗಾ’ ಅಭಿಯಾನದ ಭಾಗವಾಗಿ ಈ ತಿಂಗಳ 13ರಂದು ದಿಲ್ಲಿಯಲ್ಲಿ ಬೈಕ್ ರ್‍ಯಾಲಿ ನಡೆಯಲಿದ್ದು ಎಲ್ಲ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ.