ಮಡಿಕೇರಿ: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಆರ್ಭಟ ಮುಂದುವರಿದಿದೆ. ಕೊಡಗು ಜಿಲ್ಲೆಯಲ್ಲೂ ಹಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಜನಜೀವನ ಏರುಪೇರಾಗಿದೆ.
ಭಾರೀ ಮಳೆಯಿದಾಗಿ ನದಿಗಳು ಉಕ್ಕಿ ಹರಿಯಿತ್ತಿದ್ದು, ನದಿ ತೀರದ ಪ್ರದೇಶಗಳು ಜಲಾವೃತವಾಗಿವೆ. ಇದೇ ವೇಳೆ, ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗಿತ್ತಿದೆ. ರಾತ್ರಿ 12 ಗಂಟೆಯಿಂದ ಸುಮಾರಿಗೆ ಸುಮಾರು 10 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ನದಿಗೆ ಬಿಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಹಾರಂಗಿ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ಹೊರಹರಿವು ಇರುವುದರಿಂದ ಕಾವೇರಿ ಮತ್ತು ಹಾರಂಗಿ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.