ಮಂಗಳೂರು: ಅಪ್ರಾಪ್ತೆಗೆ ಅನ್ಯಕೋಮಿನ ಯುವಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಹಿಂದೂ ಮುಖಂಡ ಅರುಣ್ ಪುತ್ತಿಲ ಬೆಂಬಲಿಗರು ಪೊಲೀ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಪುತ್ತೂರು ಕಂಬಳ ವೀಕ್ಷಿಸಲು ತೆರಳುತ್ತಿದ್ದ ಅಪ್ರಾಪ್ತೆಗೆ ಕಡಬ ಮೂಲದ ಶಾಕೀರ್ ಎಂಬಾತ ಕಿರುಕುಳ ನೀಡಿದ್ದಾನೆ ಎಂಬುದು ಆರೋಪ ಈ ಹಿನ್ನೆಲೆಯಲ್ಲಿ ಶಾಕೀರ್ ಎಂಬಾತನನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಪ್ರಾಪ್ತೆಗೆ ಕಿರುಕುಳ ನೀಡಲಾಗಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಹಿಂದೂ ಕಾರ್ಯಕರ್ತರು ಪುತ್ತೂರು ನಗರ ಠಾಣೆಯ ಬಳಿ ದೌಡಾಯಿಸಿ ಕೃತ್ಯವನ್ನು ಖಂಡಿಸಿದರು. ಆರೋಪಿ ಶಾಕೀರ್ನನ್ನು ತಮಗೆ ಒಪ್ಪಿಸುವಂತೆ ಒತ್ತಾಯಿಸಿದರು. ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಮುಂದಾದರು. ಇದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಭೇಟಿ ನೀಡಿದ ಹಿಂದೂ ಮುಖಂಡ ಅರುಣ್ ಪುತ್ತಿಲ ಅವರು ಯುವಕರನ್ನು ಸಮಾಧಾನ ಪಡಿಸಿದರು. ಈ ನಡುವೆ, ಬಂಧಿತ ಆರೋಪಿ ಶಾಕೀರ್ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.