ಹಾವೇರಿ: ರಾಣಿಬೆನ್ನೂರು ತಾಲ್ಲೂಕಿನ ಚಳಗೇರಿಗೆಯಲ್ಲಿ, ಉಕ್ರೇನ್ ನಲ್ಲಿ ಮೃತಪಟ್ಟ ವೈದ್ಯಕೀಯ ವಿದ್ಯಾರ್ಥಿ ನವೀನ ಗ್ಯಾನಗೌಡರ್ ಅವರ ಮನೆಗೆ ಭೇಟಿ ನೀಡಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಅವರ ಪಾಲಕರಿಗೆ ಸಾಂತ್ವನ ಹೇಳಿದರು.
ಭಾರತ ಸರಕಾರ, ಯುಕ್ರೇನ್ ಅಲ್ಲಿರುವ ಪ್ರತಿಯೊಬ್ಬ ಭಾರತೀಯನೂ ರಕ್ಷಿಸುವ ನಿಟ್ಟಿನಲ್ಲಿ ಅಗತ್ಯದ ಮುನ್ನೆಚ್ಚರಿಕೆ ಹಾಗೂ ಪ್ರಯತ್ನಗಳನ್ನು ಮುಂದುವರಿಸಿದೆ, ಈಗಾಗಲೇ 18,000ಕ್ಕೂ ಅಧಿಕ ಭಾರತೀಯರನ್ನು ಉಕ್ರೇನ್ ನಿಂದ ನೆರೆಯ ದೇಶಗಳ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಹಾಗೂ 10,000 ಕ್ಕೂ ಹೆಚ್ಚಿನ ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗಿದೆ ಎಂದು ಕೇಂದ್ರ ಸಚಿವೆ ಮಾಹಿತಿ ನೀಡಿದರು.