ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದ ತನಿಖೆಗೆ ಹಠಾತ್ ತಿರುವು ಸಿಕ್ಕಿದೆ. ಜಾರಿ ನಿರ್ದೇಶನಾಲಯ (ED) ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಮುಡಾ ಹಗರಣ ಪ್ರಕರಣದಲ್ಲಿ ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರ ಹೇಳಿಕೆ ಆಧರಿಸಿ ಇತರೆ ಆರೋಪಿಗಳ ವಿರುದ್ಧದ ತನಿಖೆ ನಡೆಸಲು ಇಡಿಗೆ ಹೈಕೋರ್ಟ್ ವಿಭಾಗೀಯ ಪೀಠ ಬುಧವಾರ ಅವಕಾಶ ನೀಡಿ ಆದೇಶಿಸಿದೆ.
ಹೈಕೋರ್ಟ್‌ನ ಈ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ಅವರಿಗೂ ವಿಚಾರಣೆಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ