ಬೆಂಗಳೂರು: ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಏಪ್ರಿಲ್ 24ರ ವರೆಗೂ ವಿಚಾರಣೆ ನೊಟೀಸ್ ನೀಡದಂತೆ ಕೋರ್ಟ್ ತನಿಖಾ ಸಂಸ್ಥೆಗೆ ನೀಡಿರುವ ಆದೇಶದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಕೆಶಿ,, ‘ಇಡಿ ಅವರು ನನ್ನ ವಿರುದ್ಧ ಮೂರ್ನಾಲ್ಕು ಪ್ರಕರಣ ವಿಚಾರಣೆ ಮಾಡುತ್ತಿದ್ದಾರೆ. ಯಾವ ಪ್ರಕರಣದಲ್ಲಿ ಕೋರ್ಟ್ ಈ ಆದೇಶ ನೀಡಿದೆ ಗೊತ್ತಿಲ್ಲ. ಇಡಿ ಅಧಿಕಾರಿಗಳು ನ್ಯಾಷನಲ್ ಹೆರಾಲ್ಡ್ ವಿಚಾರವಾಗಿ ಯಂಗ್ ಇಂಡಿಯಾ ಸಂಸ್ಥೆಗೆ ದೇಣಿಗೆ ನೀಡಿರುವ ಬಗ್ಗೆ ಫೆ. 22 ರಂದು ಹಾಜರಾಗಲು ಹೇಳಿದ್ದಾರೆ. ನನಗೆ ದಿನಾ ಮೂರು ನಾಲ್ಕು ಕೇಸ್ ವಿಚಾರವಾಗಿ ನೊಟೀಸ್ ನೀಡುತ್ತಿದ್ದಾರೆ. ಹೀಗಾಗಿ ಯಾವ ವಿಚಾರಣೆಗೆ ಈ ಆದೇಶ ನೀಡಿದ್ದಾರೆ ಎಂದು ನಮ್ಮ ವಕೀಲರಿಂದ ಮಾಹಿತಿ ಪಡೆಯುತ್ತೇನೆ. ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಹೀಗಾಗಿ ನ್ಯಾಯಾಲಯದ ಮೊರೆ ಹೋಗಿದ್ದೇನೆ’ ಎಂದು ತಿಳಿಸಿದರು.