ಬೆಂಗಳೂರು: ಕೊರೊನಾ ವೈರಸ್ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೊರೊನಾ ವೈರಸ್ ಹೊಡೆತಕ್ಕೆ ರಾಷ್ಟ್ರವೇ ತತ್ತರಿಸಿದೆ. ಜನ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇಂಥ ಸೂತಕದ ಸಂದರ್ಭದಲ್ಲಿ ರಾಜ್ಯಸರ್ಕಾರ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಎಲ್ಲ ಪತ್ರಿಕೆಗಳ ಮುಖಪುಟದಲ್ಲಿ ಪ್ರಧಾನಿ ನಗುಮೊಗದ ಜಾಹೀರಾತೊಂದನ್ನು ನೀಡಿದೆ. ಈ ಮೂಲಕ ಜನರ ನೋವನ್ನು ಗೇಲಿ ಮಾಡಿದೆ. ಇದು ನಿಜಕ್ಕೂ ಆತ್ಮಸಾಕ್ಷಿಯ ನಡೆಯಲ್ಲ!
1/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 22, 2021
ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ ಎಂದು ಹೆಚ್ಡಿಕೆ ಹೇಳಿದ್ದಾರೆ.
ಮೆಟ್ರೋ 2ನೇ ಹಂತದ ಯೋಜನೆಗಳಿಗೆ ಕೇಂದ್ರ ಅನುದಾನ ನೀಡಿದ್ದನ್ನೇ ನೆಪ ಮಾಡಿಕೊಂಡು ಸರ್ಕಾರ ಪ್ರಚಾರಕ್ಕೆ ಧುಮುಕಿದೆ. ರಾಜ್ಯಕ್ಕೆ ಕೇಂದ್ರ ನೀಡುವ ಅನುದಾನವೇನು ಭಿಕ್ಷೆಯಲ್ಲ. ಅದು ನಮ್ಮ ಹಕ್ಕು. ಅದರಲ್ಲಿ ಪ್ರಚಾರ ಪಡೆಯುವ, ಜಾಹೀರಾತು ನೀಡುವ ತುರ್ತು ಏನಿದೆ ಎಂಬುದನ್ನು ಸರ್ಕಾರ ಪರಾಮರ್ಶೆ ಮಾಡಬೇಕಿತ್ತು. ಇದು ಸರ್ಕಾರದ ಹೊಣೆಗೇಡಿತನ.
2/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 22, 2021
ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು ಎಂದು ಅವರು ಪ್ರತಿಪಾದಿಸಿದ್ದಾರೆ.
ಸಮಾಜವೇ ಗಂಡಾಂತರದಲ್ಲಿ ಸಿಲುಕಿರುವಾಗ ಈ ಪ್ರಚಾರ ಪ್ರಿಯತೆ ಏಕೆ? ಜಾಹೀರಾತುಗಳಲ್ಲಿ ನೀವು ಬೀರುವ ನಗು ನೋವಿನಲ್ಲಿರುವವರನ್ನು ಅಣಕಿಸುತ್ತದೆ ಎಂಬ ಸೂಕ್ಷ್ಮತೆ ಇಲ್ಲವೇ? ಜಾಹೀರಾತುಗಳಿಗೆ ನೀಡುವ ಹಣವನ್ನು ವೈದ್ಯಕೀಯ ವ್ಯವಸ್ಥೆಗೆ ಬಳಸಿಕೊಂಡಿದ್ದಿದ್ದರೆ ಯಾರಾದರೂ ಬೇಡವೆನ್ನುತ್ತಿದ್ದರೆ? ಸರ್ಕಾರದ ಪ್ರಚಾರದ ಈ ಹುಚ್ಚು ನಾಚಿಕೆಗೇಡಿನದ್ದು.
3/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 22, 2021
ಸರ್ಕಾರ ಕೋವಿಡ್ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಸರ್ಕಾರ ಕೋವಿಡ್ ಅನ್ನು ನಿಭಾಯಿಸಿದ ರೀತಿ ಮತ್ತು ಅದರಲ್ಲಿ ನಡೆದಿರಬಹುದಾದ ಭ್ರಷ್ಟಾಚಾರದ ಬಗ್ಗೆ ಆರೋಪಗಳು ಬಂದವು. ಆದರೆ, ಕೋವಿಡ್ ವಿರುದ್ಧದ ಹೋರಾಟದಲ್ಲಿ ಸರ್ಕಾರ ನೈತಿಕತೆ ಪ್ರಶ್ನೆ ಎದುರಿಸಬಾರದು ಎಂಬ ಕಾರಣಕ್ಕೆ ನಾವೆಲ್ಲರೂ ಸುಮ್ಮನಿದ್ದೆವು. ಆದರೆ, ಕಣ್ಣ ಮುಂದಿನ ಇಂಥ ಬೇಜವಾಬ್ದಾರಿತನ, ಪ್ರಚಾರಪ್ರಿಯತೆಯನ್ನು ಸಹಿಸಲಾಗದು.
4/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 22, 2021
ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ದುರಿತ ಕಾಲದಲ್ಲಿ ಸರ್ಕಾರ ಜನರ ಪ್ರಾಣ ರಕ್ಷಣೆಗಾಗಿ ಪಣತೊಡಬೇಕೆ ಹೊರತು, ಪ್ರಚಾರದಲ್ಲಿ ತೊಡಗಬಾರದಿತ್ತು. ಬಿಜೆಪಿಯ ಪ್ರಚಾರ ಪ್ರಿಯತೆ ಎಲ್ಲರಿಗೂ ತಿಳಿದಿರುವ ವಿಚಾರವೇ. ಆದರೆ, ಈ ಸನ್ನಿವೇಶದಲ್ಲಾದರೂ ಅದನ್ನು ನಿಲ್ಲಿಸಿ ಮಾದರಿ ನಡೆ ಅನುಸರಿಸಬೇಕಿತ್ತು. ಜನರ ವಿಶ್ವಾಸ ಗೆಲ್ಲಿ, ಇಲ್ಲದೇ ಹೋದರೆ, ನಿಮ್ಮ ಪ್ರಚಾರಗಳೆಲ್ಲವೂ ಋಣವಾಗುತ್ತದೆ.
5/5— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 22, 2021