ಬೆಂಗಳೂರು: ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಸಿಎಂ ಯಡಿಯೂರಪ್ಪ ಪ್ರಚಾರ ಸಭೆಯಲ್ಲಿ ಹೇಳಿರುವ ಬಗ್ಗೆ ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮಸ್ಕಿಯಲ್ಲಿ ಶಾಸಕರಾಗಿದ್ದವರ ಮಹಾತ್ಯಾಗದಿಂದ ಬಿಎಸ್ವೈ ಅವರಿಗೆ ಅಧಿಕಾರ ಸಿಕ್ಕು 2 ವರ್ಷಗಳಾಗುತ್ತಾ ಬಂದಿವೆ. ಈ ವರೆಗೆ ಯಾಕಾಗಿರಲಿಲ್ಲ ಮಸ್ಕಿಯ ಅಭಿವೃದ್ಧಿ? ಪ್ರಗತಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ? ಎಂದು ಪ್ರಶ್ನಿಸಿ ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.
ಮಸ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಸಿಎಂ @BSYBJP ಇತ್ತೀಚೆಗೆ ಪ್ರಚಾರ ಸಭೆಯಲ್ಲಿ ಹೇಳಿರುವುದು ಗಮನಕ್ಕೆ ಬಂತು. ಮಸ್ಕಿಯಲ್ಲಿ ಶಾಸಕರಾಗಿದ್ದವರ ಮಹಾತ್ಯಾಗ(?)ದಿಂದ ಬಿಎಸ್ವೈ ಅವರಿಗೆ ಅಧಿಕಾರ ಸಿಕ್ಕು 2 ವರ್ಷಗಳಾಗುತ್ತಾ ಬಂದಿವೆ. ಈ ವರೆಗೆ ಯಾಕಾಗಿರಲಿಲ್ಲ ಮಸ್ಕಿಯ ಅಭಿವೃದ್ಧಿ? ಪ್ರಗತಿಗೆ ಉಪಚುನಾವಣೆ ಮುಹೂರ್ತವಾಗಿತ್ತೇ?
1/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 22, 2021
ಸರಣಿ ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕುಮಾರಸ್ವಾಮಿ, ಚುನಾವಣೆ ನಿಗದಿಯಾಗಿದ್ದರಿಂದ ಮಸ್ಕಿ ಅಭಿವೃದ್ಧಿಗೆ ಈಗ ಮುಹೂರ್ತ ಬಂದಿದೆ, ಒಪ್ಪೋಣ. ಆದರೆ, ವರ್ಷದ ಹಿಂದೆಯೇ ಚುನಾವಣೆಗಳಾದ ‘ಬಾಂಬೆ ತಂಡ’ದ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ? ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ ಸಿಎಂ ಯಡಿಯೂರಪ್ಪನವರೇ? ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು ಎಂದು ನಿಮಗಾದರೂ ಅನಿಸದೇ? ಎಂದು ಪ್ರಶ್ನಿಸಿದ್ದಾರೆ.
ಚುನಾವಣೆ ನಿಗದಿಯಾಗಿದ್ದರಿಂದ ಮಸ್ಕಿ ಅಭಿವೃದ್ಧಿಗೆ ಈಗ ಮುಹೂರ್ತ ಬಂದಿದೆ, ಒಪ್ಪೋಣ. ಆದರೆ, ವರ್ಷದ ಹಿಂದೆಯೇ ಚುನಾವಣೆಗಳಾದ 'ಬಾಂಬೆ ತಂಡ'ದ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿ ಎಷ್ಟಾಗಿದೆ? ಅವೆಲ್ಲವೂ ಭೂಲೋಕದ ಸ್ವರ್ಗಗಳಾಗಿವೆಯೇ ಸಿಎಂ ಯಡಿಯೂರಪ್ಪನವರೇ? ಚುನಾವಣಾ ಕಾಲದ ನಿಮ್ಮ ಅಭಿವೃದ್ಧಿಯ ಜಪ ಬೂಟಾಟಿಕೆತನದ್ದು ಎಂದು ನಿಮಗಾದರೂ ಅನಿಸದೇ?
2/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 22, 2021
ಮಸ್ಕಿ ಕ್ಷೇತ್ರವಿರಲಿ, ಬೇರಾವ ಕ್ಷೇತ್ರವೇ ಆಗಿರಲಿ ಅಭಿವೃದ್ಧಿಗೆ ಸರ್ಕಾರದಲ್ಲಿ ಹಣವೆಲ್ಲಿದೆ ಮುಖ್ಯಮಂತ್ರಿಗಳೇ? ರಾಜ್ಯದ ತೆರಿಗೆ ಹಣ, ಜನರ ಬೆವರಿನ ಋಣ ನಿಮ್ಮ ಸರ್ಕಾರದಲ್ಲಿರುವ ‘ಏಕಗವಾಕ್ಷಿ’ಗೆ ಆಪೋಷನವಾಗುತ್ತಿಲ್ಲವೇ? ಚುನಾವಣಾ ಕಾಲದಲ್ಲಿ ಮುಖ್ಯಮಂತ್ರಿ ಮತ್ತು ಅವರ ಸರ್ಕಾರದ ‘ಏಕಗವಾಕ್ಷಿ’ ಆಡುವ ಮಾತುಗಳಿಗೆ ಜನ ಮನ್ನಣೆ ನೀಡಬಾರದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಸ್ಕಿ ಕ್ಷೇತ್ರವಿರಲಿ, ಬೇರಾವ ಕ್ಷೇತ್ರವೇ ಆಗಿರಲಿ ಅಭಿವೃದ್ಧಿಗೆ ಸರ್ಕಾರದಲ್ಲಿ ಹಣವೆಲ್ಲಿದೆ ಮುಖ್ಯಮಂತ್ರಿಗಳೇ? ರಾಜ್ಯದ ತೆರಿಗೆ ಹಣ, ಜನರ ಬೆವರಿನ ಋಣ ನಿಮ್ಮ ಸರ್ಕಾರದಲ್ಲಿರುವ 'ಏಕಗವಾಕ್ಷಿ'ಗೆ ಆಪೋಷನವಾಗುತ್ತಿಲ್ಲವೇ? ಚುನಾವಣಾ ಕಾಲದಲ್ಲಿ ಮುಖ್ಯಮಂತ್ರಿ ಮತ್ತು ಅವರ ಸರ್ಕಾರದ 'ಏಕಗವಾಕ್ಷಿ' ಆಡುವ ಮಾತುಗಳಿಗೆ ಜನ ಮನ್ನಣೆ ನೀಡಬಾರದು.
3/3— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 22, 2021