ಚಿಕ್ಕಮಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ವರ್ಷಧಾರೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಭಾರೀಮಳೆ ಅವಾಂತರಗಳಿಗೆ ಕಾರಣವಾಗಿವೆ. ಹಲವೆಡೆ ಶಾಲೆಗಳಿಗೆ ಮಂಗಳವಾರವೂ ರಜೆ ನೀಡಲಾಗಿದೆ.
ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಭದ್ರಾ ನದಿಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಭದ್ರಾ ನದಿಗೆ ಅಡ್ಡವಾಗಿ ಇರುವ ಹೆಬ್ಬಾಳೆ ಸೇತುವೆ ಮುಡುಗಡೆಯಾಗಿ ಅವಾಂತರ ಸೃಷ್ಟಿಯಾಗಿದೆ. ಕಳಸ ತಾಲೂಕಿನ ಹೊರನಾಡು ಬಳಿಯ ಈ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದರಿಂದ ಹೊರನಾಡು-ಕಳಸ ಸಂಪರ್ಕ ಕಡಿತಗೊಂಡಿದೆ.