ಬೆಂಗಳೂರು: ಕರಾವಳಿ ಮಲೆನಾಡಿನಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ನದಿ ತೀರದ ಪ್ರದೇಶಗಳು ಜಲಾವೃತವಾಗಿವೆ. ನಿರಂತರ ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ.
ಈ ನಡುವೆ ಇನ್ನೂ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಮಹಾರಾಷ್ಟ್ರ ಹಾಗೂ ಉತ್ತರ ಕೇರಳದ ಕರಾವಳಿಯ ಉದ್ದಕ್ಕೂ ಸರಾಸರಿ ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಮೇಲುಬ್ಬರದ ಪರಿಣಾಮ
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಗುರುವಾರ ಭಾರಿ ಮಳೆಯಾಗಲಿದೆ. ಜುಲೈ, 12 ರಿಂದ ಜುಲೈ 15ರವರೆಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜುಲೈ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 12 ರಿಂದ ಜುಲೈ 15ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ: (ಮೂಲ:IMD)
ಉತ್ತರ ಮಹಾರಾಷ್ಟ್ರ ಹಾಗೂ ಉತ್ತರ ಕೇರಳದ ಕರಾವಳಿಯ ಉದ್ದಕ್ಕೂ ಸರಾಸರಿ ಸಮುದ್ರ ಮಟ್ಟದಲ್ಲಿ ಉಂಟಾಗಿರುವ ಮೇಲುಬ್ಬರದ ಪರಿಣಾಮ
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಇಂದು ಭಾರಿ ಮಳೆ ಹಾಗೂ ಜುಲೈ, 12 ರಿಂದ ಜುಲೈ 15ರವರೆಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. pic.twitter.com/mRiRCZMuGc— Karnataka State Natural Disaster Monitoring Centre (@KarnatakaSNDMC) July 11, 2024