ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದ್ದು ಕರಾವಳಿ ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕರ್ನಾಟಕ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದೆ. ಪ್ತಮುಖ ನದಿಗಳು ಪ್ರವಾಹದ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.
ಇದೇ ವೇಳೆ, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ. ಕರಾವಳಿ ಮಲೆನಾಡಿನಲ್ಲಿ ಜುಲೈ 12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ತಿಳಿಸಿದ್ದಾರೆ.
ಬಯಲುಸೀಮೆ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ.