ಬೆಂಗಳೂರು: ಜೂನ್ ಮೊದಲ ವಾರದಲ್ಲೇ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದ್ದು, ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕಕ್ಕೆ ಮೇ 31ರಂದು ಮುಂಗಾರು ಪ್ರವೇಶವಾಗಲಿದ್ದು, ಜೂನ್ 2ರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಕೊಡಗು, ಮೈಸೂರು, ರಾಮನಗರ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಚಿಕ್ಕಬಳ್ಳಾಪುರ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಮುನ್ಸೂಚನೆ ನೀಡಿದೆ.


























































