ಮಂಗಳೂರು: ರಾಜ್ಯದ ಕರಾವಳಿಯಲ್ಲಿ ಭಾನುವಾರದಿಂದ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಜೂ.22 ಮತ್ತು 23ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಗಾಳಿ ಹೆಚ್ಚಾಗಲಿದೆ ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ನಿರೀಕ್ಷೆ ಇದೆ. ಕರಾವಳಿ ಭಾಗದಲ್ಲಿ 204.5 ಮಿ.ಮೀ.ಗೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂಬ ಮುನ್ಸೂಚನೆ ಸಿಕ್ಕಿದೆ.