ಬೆಂಗಳೂರು: ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಬಿರುಸಾಗಿದ್ದು ಭಾರೀ ಮಳೆ ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ನಡುವೆ, ಕರ್ನಾಟಕದ ಕರಾವಳಿ ಮಲೆನಾಡಲ್ಲಿ ಜುಲೈ 24ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ರಾಮನಗರ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಗಳಿವೆ. ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, , ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.