ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನ ಏರುಪೇರಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿರಂತರ ಮಳೆಯಾಗುತ್ತಿದ್ದು ಇನ್ನೂ ಕೆಲವು ದಿನ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 16 ರಿಂದ 18 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದೇ ವೇಳೆ, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದ್ದು, ನದಿ ಮತ್ತು ಸಮುದ್ರ ತೀರದ ನಿವಾಸಿಗಳು ಎಚ್ಚರ ವಹಿಸಬೇಕೆಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದ್ದಾರೆ.