ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಮಳೆಯ ನಡುವೆಯೇ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆಯೂ ಸಂಭವಿಸಿದೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಮಳೆ ಸಂದರ್ಭದಲ್ಲಿ ಮರದ ಅಡಿಯಲ್ಲಿ ಆಸರೆ ಪಡೆದಿದ್ದಾಗ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ವಾಡಿ ಪಟ್ಟಣದ ರೈಲ್ವೆ ಕಾಲೋನಿಯ ನಿವಾಸಿಗಳಾದ ಏಕನಾಥ್ ಹಾಗೂ ಸತೀಶ್ ಶಳಕೆ ಎಂದು ಗುರುತಿಸಲಾಗಿದೆ.