ಕುಲ್ಲು: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಉಂಟಾಗಿದ್ದು, ಭಾರೀ ಸಾವು ನೋವು ಸಂಭವಿಸಿದೆ. ಭಾರೀ ಮಳೆ, ದಿಢೀರ್ ಪ್ರವಾಹದಿಂದಾಗಿ ಇಬ್ಬರು ಸಾವನ್ನಪ್ಪಿದ್ದು, 23 ಜನರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ ಎಂದು ಶಂಕಿಸಲಾಗಿದೆ.
Situation really dangerous in Kullu and Lahaul Spiti right now. Multiple cloudbursts reported. Just look at nature’s fury — a jeep being washed away by the river. Praying for everyone’s safety.#HimachalPradesh | #Kullu https://t.co/wjzpL7AxXy pic.twitter.com/qXjCVnC90L
— Nikhil saini (@iNikhilsaini) June 25, 2025
ಸೈನ್ಜ್ನ ಜೀವಾ ನಲ್ಲಾ ಮತ್ತು ರೆಹ್ಲಾ ಬಿಹಾಲ್ ಹಾಗೂ ಗಡ್ಸಾ ಪ್ರದೇಶದ ಶಿಲಾಗಢದಲ್ಲಿ ಮೇಘಸ್ಫೋಟವಾಗಿದೆ. ಸ್ಥಳೀಯ ಅಧಿಕಾರಿಗಳು ಹತ್ತಿರದ ಪ್ರದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ.
Multiple cloudbursts being reported from Kullu district right now — Jibhi, Sainj, Tirthan hit. Horrific visuals coming in. Praying for everyone’s safety. Requesting people to stay alert and avoid travel in these areas.#HimachalPradesh | #Kullu pic.twitter.com/jSW3Bk0KAk
— Nikhil saini (@iNikhilsaini) June 25, 2025
ಇಂದಿರಾ ಪ್ರಿಯದರ್ಶಿನಿ ಜಲವಿದ್ಯುತ್ ಯೋಜನಾ ಸ್ಥಳದ ಬಳಿಯ ಕಾರ್ಮಿಕ ಕಾಲೋನಿಯಲ್ಲಿ ನೆಲೆಸಿದ್ದ ಸುಮಾರು 15ಕ್ಕೂ ಹೆಚ್ಚು ಕಾರ್ಮಿಕರು ಪ್ರವಾಹಕ್ಕೆ ಕೊಚ್ಚಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ, ಕುಲ್ಲು ಜಿಲ್ಲೆಯಲ್ಲಿ ದಿಢೀರ್ ಪ್ರವಾಹಕ್ಕೆ ಮನೆಗಳು, ಕಟ್ಟಡಗಳು, ರಸ್ತೆಗಳು ಮತ್ತು ಸೇತುವೆಗಳಿಗೆ ವ್ಯಾಪಕ ಹಾನಿಯುಂಟಾಗಿದೆ. ಲಾಹೌಲ್ ಮತ್ತು ಸ್ಪಿತಿ ಜಿಲ್ಲೆಯಲ್ಲಿ ಭೂಕುಸಿತ ಘಟನೆಗಳೂ ಸಂಭವಿಸಿವೆ.