ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಬಿರುಸಾಗಿದ್ದು ನಿರಂತರ ವರ್ಷಧಾರೆಯಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜನರು ಪರದಾಡುವಂತಾಗಿದೆ.
ಮಂಗಳವಾರದಿಂದ ಭಾರೀ ಮಳೆಯಾಗುತ್ತಿದ್ದು ಸರಣಿ ಅವಘಡಗಳಿಗೂ ದಕ್ಷಿಣ ಕನ್ನಡ ಜಿಲ್ಲೆ ಸಾಕ್ಷಿಯಾಗಿದೆ. ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಮನೆಯ ಗೋಡೆ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ಬೆಚ್ಚಿಬೀಳಿಸಿದೆ.
ಈ ನಡುವೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಜೂನ್ 27 (ಗುರುವಾರ) ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ,ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.






































































