ನವದೆಹಲಿ: ಭಾರೀ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ನವದೆಹಲಿ ತತ್ತರಿಸಿದೆ. ಸುಮಾರು 9 ದಶಕಗಳಲ್ಲೇ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದು, ದೆಹಲಿಯ ವಿವಿಧೆಡೆ ಸಂಭವಿಸಿದ ಸರಣಿ ಅವಘಡಗಳಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.
ಮುಂಗಾರು ಬಿರುಸಾಗಿದ್ದು ನಿರಂತರ ವರ್ಷಧಾರೆಯಿಂದಾಗಿ ದೆಹಲಿಯ ವಿವಿಧ ಬಡಾವಣೆಗಳು ಜಲಾವೃತವಾಗಿವೆ. ಶುಕ್ರವಾರ ಒಂದೇ ದಿನದಲ್ಲಿ 23 ಸೆಂ.ಮೀ. ಮಳೆಯಾಗಿ ಪ್ರವಾಹ ಸೃಷ್ಟಿಯಾಗಿದೆ.
ದೆಹಲಿ ವಿಮಾನ ನಿಲ್ದಾಣದ ಅವಘಡದ ನಂತರ ವಸಂತ ವಿಹಾರ್ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯೂ ಉಸ್ಮಾನ್‌ಪುರ ಪ್ರದೇಶದಲ್ಲಿ ಕೊಳದಲ್ಲಿ ಮುಳುಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.