ಬೆಂಗಳೂರು: ಕೊಲೆ ಪ್ರಕರಣದಲ್ಲಿ ತಾತ್ಕಾಲಿಕ ಜಾಮೀನಿನಲ್ಲಿ ಬಿಡುಗಡೆಯಾಗಿರುವ ನಟ ದರ್ಶನ್ ಅವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿದೆ.
ಬೆನ್ನು ನೋವಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ನ್ಯಾಯಾಲಯ ತಾತ್ಕಾಲಿಕ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಅವಧಿ ಡಿಸೆಂಬರ್ 11ಕ್ಕೆ ಅಂತ್ಯವಾಗುವ ಹಿನ್ನೆಲೆಯಲ್ಲಿ ವಿಸ್ತರಣೆಗಾಗಿ ದರ್ಶನ್ ಹೈಕೋರ್ಟಿಗೆ ಮನವಿ ಮಾಡಿದ್ದರು. ದರ್ಶನ್ ಅವರ ಪರವಾಗಿ ವಾದ ಮಂಡಿಸಿದ ವಕೀಲ ಸಿ.ವಿ. ನಾಗೇಶ್, ನಟನಿಗೆ ರಕ್ತದೊತ್ತಡ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆ ಇನ್ನೂ ನಡೆಸಿಲ್ಲ ಎಂದು ನ್ಯಾಯಪೀಠದ ಗಮನಸೆಳೆದರು. ಡಿಸೆಂಬರ್ 11ಕ್ಕೆ ದರ್ಶನ್ ಅವರ ಶಸ್ತ್ರ ಚಿಕಿತ್ಸೆಗೆ ದಿನಾಂಕ ನಿಗದಿ ಆಗಿದೆ ಎಂದೂ ಮಾಹಿತಿ ನೀಡಿದರು.
ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ದರ್ಶನ್ ಅವರ ರೆಗ್ಯುಲರ್ ಬೇಲ್ ಕುರಿತ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿರುವುದರಿಂದ, ಆ ಸಂಬಂಧದ ಆದೇಶ ಪ್ರಕಟವಾಗುವವರೆಗೂ ಮಧ್ಯಂತರ ಜಾಮೀನು ಅವಧಿ ಮುಂದುವರಿಸಿ ಆದೇಶಿಸಿದೆ.