ಬೆಂಗಳೂರು: ಹೆದ್ದಾರಿ ಅಭಿವೃದ್ಧಿ ಹೆಸರಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದ್ದು, ಕಿಕ್ ಬ್ಯಾಕ್ ಹಗರಣದಲ್ಲಿ ಸಿಎಂ ಸೇರಿದಂತೆ ಪಿಡಬ್ಲ್ಯುಡಿ ಸಚಿವರು, ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಜೆಡಿಎಸ್ ಪಕ್ಷ ಅನುಮಾನ ವ್ಯಕ್ತಪಡಿಸಿದೆ..ಈ ಹಗರಣಬಗ್ಗೆ ವಿಶೇಷ ತನಿಖಾ ತಂಡ ರಚಿಸಿ, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜಾತ್ಯತೀತ ಜನತಾ ದಳ, 500 ಕೋಟಿ ಕಿಕ್ ಬ್ಯಾಕ್ ಕೊಟ್ಟವರಿಗೆ ಟೆಂಡರ್ ಭಾಗ್ಯ! ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ ಮಾಸುವ ಮುನ್ನವೇ ರಾಜ್ಯ ಕಾಂಗ್ರೆಸ್ ಸರ್ಕಾರದ ಮತ್ತೊಂದು ಬೃಹತ್ ಹಗರಣ ಬಯಲಿಗೆ ಬಂದಿದೆ ಎಂದು ಟೀಕಿಸಿದೆ. ಪಿಡಬ್ಲ್ಯೂಡಿ ಇಲಾಖೆಯ ಟೆಂಡರ್ ನಲ್ಲಿ ಕಾಂಗ್ರೆಸ್ ಸಚಿವರು ನೂರಾರು ಕೋಟಿ ಕಿಕ್ ಬ್ಯಾಕ್ ಪಡೆದಿರುವುದರ ಬಗ್ಗೆ ವರದಿಯಾಗಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿ 4000 ಕೋಟಿ ಅಕ್ರಮ ಟೆಂಡರ್ ನೀಡಿ ಬರೋಬ್ಬರಿ 500 ಕೋಟಿಗೂ ಹೆಚ್ಚು ಹಣ ಕಿಕ್ ಬ್ಯಾಕ್ ಪಡೆದಿದ್ದು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಪಿಡಬ್ಲ್ಯುಡಿ ಸಚಿವರು, ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ಗುಮಾನಿ ಎದ್ದಿದೆ. ಈ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಿ, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.
500 ಕೋಟಿ ಕಿಕ್ ಬ್ಯಾಕ್ ಕೊಟ್ಟವರಿಗೆ ಟೆಂಡರ್ ಭಾಗ್ಯ!
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ ಮಾಸುವ ಮುನ್ನವೇ @INCKarnataka ಸರಕಾರದ ಮತ್ತೊಂದು ಬೃಹತ್ ಹಗರಣ ಬಯಲಿಗೆ ಬಂದಿದೆ.
ಪಿಡಬ್ಲ್ಯೂಡಿ ಇಲಾಖೆಯ ಟೆಂಡರ್ ನಲ್ಲಿ ಕಾಂಗ್ರೆಸ್ ಸಚಿವರು ನೂರಾರು ಕೋಟಿ ಕಿಕ್ ಬ್ಯಾಕ್ ಪಡೆದಿರುವುದರ ಬಗ್ಗೆ ವರದಿಯಾಗಿದೆ.… pic.twitter.com/Ngi2UtQTYq
— Janata Dal Secular (@JanataDal_S) June 15, 2024





































































