ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಮುಖ್ಯಮಂತ್ರಿಯಾಗಿ ಸುಖ್ವಿಂದರ್ ಸಿಂಗ್ ಸುಖು ಇಂದು ಪ್ರಮಾಣವಚನ ಸ್ವೀಕರಿಸಿದರು
ರಿಡ್ಜ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಸುಖ್ವಿಂದರ್ ಸಿಂಗ್ ಸುಖು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಉಪಮುಖ್ಯಮಂತ್ರಿಯಾಗಿ ಮುಖೇಶ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
मैं सुखविंदर सिंह सुक्खू… pic.twitter.com/IJzsIVQKVH
— Congress (@INCIndia) December 11, 2022
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸೇರಿದಂತೆ ಕಾಂಗ್ರೆಸ್ ನಾಯಕರನೇಕರು ಈ ಪ್ರನಾಣ ವಚನ ಸಮಾರಂಭಕ್ಕೆ ಸಾಕ್ಷಿಯಾದರು.























































