ಬೆಂಗಳೂರು: ಮೋದಿ ಗ್ಯಾರೆಂಟಿ ಜೊತೆಗೆ ಕೇಂದ್ರ ಬಿಜೆಪಿಯು ಆಕರ್ಷಕ ಪ್ರಣಾಳಿಕೆ ಬಿಡುಗಡೆ ಮಾಡಿ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದರೆ, ಇತ್ತ ಕರ್ನಾಟಕದಲ್ಲಿ ಬಂಡಾಯದ ಬಾವುಟ ಹಾರಿಸಿರುವ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ತಮ್ಮದೇ ಆದ ಪ್ರಣಾಳಿಕೆ ಘೋಷಿಸಿ ಕಮಲ ಪಾಳ್ಯದಲ್ಲಿ ಕೋಲಾಹಲ ಎಬ್ಬಿಸಿದ್ದಾರೆ.
‘ಹಿಂದೂತ್ವ ಉಳಿಯಬೇಕು, ರಾಜ್ಯ ಬಿಜೆಪಿ ಅಪ್ಪ-ಮಕ್ಕಳಿಂದ ಮುಕ್ತವಾಗಬೇಕು’ ಎಂಬುದೇ ಈಶ್ವರಪ್ಪ ಅವರ ಪ್ರಣಾಳಿಕೆಯಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಈಶ್ವರಪ್ಪ ಅವರು ಟ್ವೀಟ್ ಮಾಡಿ, ‘ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ’ ಎಂದು ಸಾರಿದ್ದಾರೆ.
“ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ” #shivamogga #shivamoggaloksabhaconstituency #ModiAgainIn2024
— K S Eshwarappa (Modi Ka Parivar) (@ikseshwarappa) April 14, 2024
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ ಎಂದಿರುವ ಈಶ್ವರಪ್ಪ, ನರೇಂದ್ರ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.
ರಾಜ್ಯ @BJP4Karnataka ಮಾನ್ಯ ಅಧ್ಯಕ್ಷ @BYVijayendra ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, @narendramodi @AmitShah ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ.
— K S Eshwarappa (Modi Ka Parivar) (@ikseshwarappa) April 14, 2024