ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಬಳಿ ಜಿಲೆಟಿನ್ ಸ್ಪೋಟಗೊಂಡು ಆರು ಜನ ದುರ್ಮರಣ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕ್ವಾರಿ ಮಾಲೀಕ ನಾಗರಾಜ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನೆರೆಯ ತಮಿಳುನಾಡಿನ ಹೊಸೂರು ಬಳಿ ಆರೋಪಿ ನಾಗರಾಜ್ ಹಾಗೂ ಬ್ಲಾಸ್ಟರ್ ಗಣೇಶ್ ಎಂಬಾತನನ್ನು ಬಂಧಿಸಿದ್ದಾರೆ.
ಬುಧವಾರ ಕ್ವಾರಿ ಮಾಲೀಕರಾದ ರಾಘವೇಂದ್ರ ರೆಡ್ಡಿ ಹಾಗೂ ವೆಂಕಟಶಿವಾರೆಡ್ಡಿ ಸಹಿತ ಐವರನ್ನು ಪೊಲೀಸರು ಬಂಧಿಸಿದ್ದರು. ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಘಟನೆಗೆ ಸಂಬಂಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ..