ಬೆಂಗಳೂರು: ಚೀನಾದಲ್ಲಿ ಭೀತಿಯ ಅಲೆ ಎಬ್ಬಿಸಿರುವ HMPV ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಮೊದಲ ಪ್ರಕರಣ ಕರ್ನಾಟಕದಲ್ಲೇ ಪತ್ತೆಯಾಗಿದೆ.
ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ HMPV ಸೋಂಕು ದೃಢಪಟ್ಟಿದೆ. ಕೆಲವು ದಿನಗಳ ಹಿಂದೆ ಜ್ವರದ ಕಾರಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ 8 ತಿಂಗಳ ಮಗುವಿಲ್ಲಿ ಈ ಸೋಂಕು ದೃಢಪಟ್ಟಿದೆ.
ಮತ್ತೊಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲೂ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.