ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು ಐವರು ಯೋಧರು ಬಲಿಯಾಗಿದ್ದಾರೆ. ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಮೂಲಕ ಬಾಂಬ್ ಸ್ಫೋಟಿಸಿರುವ ಕಿಡಿಗೇಡಿಗಳ ಕೃತ್ಯದಲ್ಲಿ ಐವರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಶನಿವಾರ ಸಂಜೆ ಬುಲೇಡಾ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯ ವಾಹನವು ಹಾದುಹೋಗುವಾಗ ಸ್ಫೋಟ ಸಂಭವಿಸಿದೆ, ರಸ್ತೆಬದಿಯಲ್ಲಿ ಅಳವಡಿಸಲಾದ ಐಇಡಿಯನ್ನು ಸಿಡಿದಿದೆ ಎಂದು ಮಕ್ರನ್ ಕಮಿಷನರ್ ಸಯೀದ್ ಅಹ್ಮದ್ ಉಮ್ರಾನಿ ಈ ಮಾಹಿತಿ ನೀಡಿದ್ದಾರೆ. ಈ ಘಟನೆಯ ಬೆನ್ನಲ್ಲೇ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರವಾದ ಗುಂಡಿನ ಚಕಮಕಿಗೆ ಕಾರಣವಾಯಿತು ಎಂದು ಪಾಕಿಸ್ತಾನ ಸೇನೆಯ ಮಾಧ್ಯಮ ವಿಭಾಗ ಬಹಿರಂಗಪಡಿಸಿದೆ.




























































