.ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪಗಪಿಸಿದೆ.
ಐಎಂಎಯಿಂದ ಹೂಡಿಕೆದಾರರಿಗೆ ಆಗಿದೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿಬಂದಿತ್ತು. ಐಎಂಎ ಅಧ್ಯಕ್ಷ ಮನ್ಸೂರ್ ಖಾನ್ ನಿಂದ ನೂರಾರು ಕೋಟಿ ರೂಪಾಯಿಯನ್ನು ರೋಷನ್ ಬೇಗ್ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ.
ಪ್ರಮುಖ ಆರೋಪಿ ಮನ್ಸೂರ್ ಖಾನ್ ಹೇಳಿಕೆ ಆಧರಿಸಿ ಭಾನುವಾರ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಸುದೀರ್ಘ ವಿಚಾರಣೆ ನಡೆದಿದ ಅಧಿಕಾರಿಗಳು ಬಳಿಕ ಬಂಧಿಸಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.