ಸಿಯೋಲ್: ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರ ಬಂಧನವಾಗಿದೆ. ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಪೊಲೀಸರು ಯೂನ್ ಸುಕ್ ಯೋಲ್ ಅವರನ್ನು ಬಂಧಿಸಿದ್ದಾರೆ.
ದಕ್ಷಿಣ ಕೊರಿಯಾದ ನ್ಯಾಯಾಲಯ ಯೂನ್ ಸುಕ್ ಯೋಲ್ ವಿರುದ್ಧ ಬಂಧನ ವಾರಂಟ್ ಜಾರಿಯಾಗಿತ್ತು. ದಂಗೆ ಮತ್ತು ಅಧಿಕಾರ ದುರುಪಯೋಗದ ಆರೋಪಗಳ ಬಗ್ಗೆ ತನಿಖಾಧಿಕಾರಿಗಳು ದೋಷಾರೋಪ ಹಾರಿದ್ದು, ಈ ಆರೋಪಗಳ ಗಂಭೀರತೆ ಅರಿತ ಸಿಯೋಲ್ ನ್ಯಾಯಾಲಯವು ಯೂನ್ ಸುಕ್ ಯೋಲ್ಗೆ ಬಂಧನ ವಾರಂಟ್ ಹೊರಡಿಸಿತ್ತು.
ಜನವರಿ 15 ರ ಬುಧವಾರ ಬೆಳಗ್ಗೆ, ದಕ್ಷಿಣ ಕೊರಿಯಾದ ಅಧಿಕಾರಿಗಳು ಯುನ್ ಸುಕ್ ಯೋಲ್ ನಿವಾಸಕ್ಕೆ ತೆರಳಿ ಬಂಧಿಸಿದೆ ಎನ್ನಲಾಗಿದೆ.