ಬೆಂಗಳೂರು: ದೇಶದಲ್ಲಿ ಇಂದಿನಿಂದ ನೂತನ ಕಾನೂನು ವ್ಯವಸ್ಥೆ ಜಾರಿಗೆ ಬಂದಿದೆ. ಐಪಿಸಿ, ಸಿಆರ್ ಪಿಸಿ, ಎವಿಡೆನ್ಸ್ ಆಕ್ಟ್ ಗಳ ಬದಲಾಗಿ ಕಳೆದ ಅವಧಿಯಲ್ಲಿ ಮೋದಿ ಸರ್ಕಾರ ಪರಿಚಯಿಸಿರುವ ಭಾರತೀಯ ನಾಗರಿಕ್ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಜಾರಿಗೆ ಬಂದಿದೆ.
ಇತ್ತ ರಾಜ್ಯದಲ್ಲಿ ಬಿಎನ್‌ಎಸ್‌ಎಸ್ ಅನ್ವಯವೇ ಪ್ರಕರಣಗಳನ್ನು ದಾಖಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಹಿತಿ ಹಂಚಿಕೊಂಡ ಅವರು, ನೂತನ ಕಾನೂನುಗಳ ಜಾರಿಗಾಗಿ ಆ್ಯಪ್ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಂದಿನಿಂದ ಮೂರು ಹೊಸ ಕಾನೂನುಗಳು ಜಾರಿಯಾಗಿವೆ. ನಾವು ಹೊಸ ಕಾನೂನುಗಳ ಜಾರಿ ಬಗ್ಗೆ ಎಲ್ಲರಿಗೂ ತರಬೇತಿ ನೀಡಿದ್ದೇವೆ ಎಂದಿರುವ ಡಾ.ಜಿ. ಪರಮೇಶ್ವರ್, ಯಾವೆಲ್ಲ ಕೇಸ್ಗಳು ಬರುತ್ತವೋ ಅವೆಲ್ಲವೂ ಹೊಸ ಕಾನೂನುಗಳಡಿ ದಾಖಲಾಗುತ್ತವೆ ಎಂದು ತಿಳಿಸಿದ್ದಾರೆ.