ಅಬುಧಾಬಿ: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಜಗತ್ತಿನ ಗಮನಸೆಳೆದಿದೆ. ಅಬುಧಾಬಿಯಲ್ಲಿನ ಬಿಎಪಿಎಸ್ ಹಿಂದೂ ದೇವಾಲಯ ಏಕತೆ ಮತ್ತು ಸಾಮರಸ್ಯದ ಸಂಕೇತವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಭವ್ಯ ಮಂದಿರವನ್ನು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಯುಎಇ ಒಂದು ಸುವರ್ಣ ಅಧ್ಯಾಯವನ್ನು ಬರೆದಿದೆ ಎಂದರು. ಹಿಂದೂ ದೇವಾಲಯದ ಹಿಂದೆ ಹಲವು ವರ್ಷಗಳ ಶ್ರಮವಿದೆ ಎಂದ ಮೋದಿ, ಸ್ವಾಮಿನಾರಾಯಣ ಅವರ ಆಶೀರ್ವಾದದೊಂದಿಗೆ ನಿರ್ಮಾಣವಾಗಿರುವ ಈ ದೇವಾಲಯವು ಏಕತೆ ಮತ್ತು ಸಾಮರಸ್ಯದ ಸಂಕೇತವಾಗಿದೆ ಎಂದರು. ದೇವಾಲಯ ನಿರ್ಮಾಣದಲ್ಲಿ ಯುಎಇ ಸರ್ಕಾರದ ಪಾತ್ರ ಶ್ಲಾಘನೀಯವಾಗಿದೆ ಎಂದವರು ಹೇಳಿದರು.
The @BAPS Hindu Mandir, Abu Dhabi, UAE opens its doors for devotees! Feel very blessed to be a part of this very sacred moment. Here are some glimpses. pic.twitter.com/29IhN4ZocK
— Narendra Modi (@narendramodi) February 14, 2024





















































