ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು ಆತಂಕ ಉಂಟಾಗಿದೆ. ರಾಜ್ಯದಲ್ಲಿ ಇದುವರೆಗೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ 10,973ಕ್ಕೆ ಹೆಚ್ಚಾಗಿದೆ.
ಈ ನಡುವೆ, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೂಕ್ತ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಬೆಡ್ ಗಳನ್ನು ಕಾಯ್ದಿರಿಸುವಂತೆ ಬುಧವಾರ ಸರ್ಕಾರ ಆದೇಶಿಸಿದೆ.




















































