ಬ್ರಿಡ್ಜ್‌ಟೌನ್: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಜಯಭೇರಿ ಭಾರಿಸಿ ಈ ಬಾರಿಯ ಚಾಂಪಿಯನ್ ಆಗಿ ಮೆರೆದಿದೆ. ಬ್ರಿಡ್ಜ್‌ಟೌನ್‌ನಲ್ಲಿ ಶನಿವಾರ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ಎರಡನೇ ಟಿ20 ವಿಶ್ವಕಪ್ ಗೆದ್ದು ಬೀಗಿದೆ.
THE MOMENT WE HAVE BEEN WAITING FOR 🥺❤️
India are the #T20WorldCup2024 CHAMPIONS 🇮🇳#T20WorldCupFinal | #INDvsSA | #T20WorldCupOnStar pic.twitter.com/ue6ZEvGlvI
— Star Sports (@StarSportsIndia) June 29, 2024
ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 176 ರನ್ ಗಳಿಸಿತ್ತು. ವಿರಾಟ್ ಕೊಹ್ಲಿ 76 ರನ್ ಹಾಗೂ ಅಕ್ಷರ್ ಪಟೇಲ್ 47 ರನ್ ಗಳ ನೆರವು ಭಾರತದ ಈ ಮೊತ್ತಕ್ಕೆ ಕಾರಣವಾಯಿತು.
ಈ ಗೆಲುವಿನ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಷ್ಟೇ ಶಕ್ತವಾಯಿತು. ಈ ಮೂಲಕ 7 ರನ್‌ಗಳಿಂದ ಸೋಲೊಪ್ಪಿಕೊಂಡಿತು.
2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಅನಂತರ 2016 ರಲ್ಲಿ ಮತ್ತೊಮ್ಮೆ ಫೈನಲ್ವರೆಗೂ ತಲಿಲುಪಿದ್ದ ಭಾರತ ಗೆಲುವು ಸಾಧಿಸುವಲ್ಲಿ ಸಫಲವಾಗಿರಲಿಲ್ಲ. ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ನಿರಂತರ ಗೆಲುವು ಸಾಧಿಸುತ್ತಾ ಬಂದ ಟೀಂ ಇಂಡಿಯಾ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.