ವೆಲ್ಲಿಂಗ್ಟನ್: ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ಡಿಎಲ್ಎಸ್ ನಿಯಮದಡಿ 4 ರನ್ಗಳ ರೋಚಕ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 41 ಓವರ್ಗಳಲ್ಲಿ 134 ರನ್ಗಳಿಗೆ ಆಲೌಟ್ ಆಯಿತು. ಭಾರತದ ಪರ ಗುರ್ನೂರ್ ಬ್ರಾರ್ 30 ರನ್ ನೀಡಿ ನಾಲ್ಕು ವಿಕೆಟ್ ಪಡೆದರು. ಡೇರಿಲ್ ಮಿಚೆಲ್ 55 ಹಾಗೂ ಮಿಚೆಲ್ ಸ್ಯಾಂಟ್ನರ್ 31 ರನ್ ಗಳಿಸಿದರು.

ಗುರಿ ಬೆನ್ನಟ್ಟಿದ ಭಾರತ 26 ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿತ್ತು. ಇನ್ನು 66 ಎಸೆತಗಳಲ್ಲಿ 22 ರನ್ ಬೇಕಿದ್ದಾಗ ಮಳೆ ಆರಂಭವಾಯಿತು. ಮಳೆ ನಿಲ್ಲದ ಕಾರಣ ಪಂದ್ಯ ಸ್ಥಗಿತಗೊಂಡಿದ್ದು, ಡಿಎಲ್ಎಸ್ ನಿಯಮದಡಿ ಭಾರತಕ್ಕೆ 4 ರನ್ಗಳ ಜಯ ಘೋಷಿಸಲಾಯಿತು.















































































