ನವದೆಹಲಿ: ಸುಮಾರು 4೦ ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 21 ಮತ್ತು 22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್‌ಗೆ ಭೇಟಿ ನೀಡಲಿದ್ದಾರೆ.
ಎರಡು ದಿನಗಳ ಕುವೈತ್‌ಗೆ ಪ್ರವಾಸ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿನ ಪ್ರತಿಷ್ಠಿತ ಶೇಖ್ ಸಾದ್ ಅಲ್ ಅಬ್ದುಲ್ಲಾ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ಸುಮಾರು 5000 ಮಂದಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗಾಲ್ಫ್ ಕಪ್ ಫುಟ್ಬಾಲ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿರುವ ಮೋದಿ, ಕುವೈತ್ ಎಮಿರ್ ಮತ್ತು ಕ್ರೌನ್ ಪ್ರಿನ್ಸ್ ಅವರೊಂದಿಗೆ ಅಧಿಕೃತ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.






















































