ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಮಹಿಳಾ ಸಮುದಾಯಕ್ಕೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮಹತ್ವದ ನಿರ್ಧಾರದಲ್ಲಿ
ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ, ಸುಧಾಮೂರ್ತಿ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.
ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.






















































