ಬೆಂಗಳೂರು: ಅನುದಾನ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಮಾಡಿರುವ ಅನ್ಯಾಯ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜವಾಲ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನ ಮೇಖ್ರಿ ಸರ್ಕಲ್ ಬಳಿ ಚೊಂಬು ಹಿಡಿದುಕೊಂಡು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಬರದ ಪರಿಹಾರದ ಅನುದಾನ ಹಾಗೂ ತೆರಿಗೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ ಎಸಗಿದೆ ಎಂದು ಆಕ್ರೋಶ ಹೊರಹಾಕಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಎಸಗಿರುವ ನಿರಂತರ ಅನ್ಯಾಯ, ಮೋಸವನ್ನು ಖಂಡಿಸಿ ಸಚಿವರಾದ @krishnabgowda ಅವರ ನೇತೃತ್ವದಲ್ಲಿ ಬ್ಯಾಟರಾಯಪುರ ವಿಧಾನಸಭಾ ಕ್ಷೇತ್ರದಲ್ಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಲಾಯಿತು.#BJPChombuSarkara pic.twitter.com/0KO6N4euEs
— Karnataka Congress (@INCKarnataka) April 20, 2024
ಶಾಸಕ ರಿಜ್ವಾನ್ ಅರ್ಷದ್, ಎಐಸಿಸಿ ಕಾರ್ಯದರ್ಶಿ ಅಭಿಶೇಕ್ ದತ್ತ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿಜಯ್ ಮುಗುಂದ್, ಬಿ.ಆರ್ ನಾಯ್ಡು, ಕೆಪಿಸಿಸಿ ಉಪಾಧ್ಯಕ್ಷ ಎಸ್ ಈ ಸುದೀಂಧ್ರ, ರಾಜ್ಯ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹೆಚ್.ಎಸ್ ಮಂಜುನಾಥ್ ಗೌಡ ಸೇರಿದಂತೆ ಅನೇಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿದ್ದು ಕೇವಲ ಖಾಲಿ ಚೊಂಬು!
▶ ಬರ ಪರಿಹಾರ ವಿಚಾರದಲ್ಲಿ 18 ಸಾವಿರ ಕೋಟಿ ಚೊಂಬು
▶ 15ನೇ ಹಣಕಾಸು ಆಯೋಗದಿಂದ ನೀಡಬೆಕಿದ್ದ 62 ಸಾವಿರ ಕೋಟಿ ಚೊಂಬು
▶ ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದು ಹೇಳಿ ನೀಡಿದ್ದು ಮಾತ್ರ ಚೊಂಬು
▶ ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ… pic.twitter.com/H806hAHRyI
— Karnataka Congress (@INCKarnataka) April 20, 2024