ಬೆಂಗಳೂರು: ಹೊಲಸು ಒಲೈಕೆ ರಾಜಕಾರಣಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ರಾಜ್ಯ ಸರ್ಕಾರ ಅನ್ಯಾಯವೆಸಗುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರದ ದಲಿತ ವಿರೋಧಿ ಮನಸ್ಥಿತಿಗೆ ಇದಕ್ಕಿಂತ ಮತ್ತೊಂದು ಉದಾಹರಣೆ ಇಲ್ಲ ಎಂದು ಟ್ವೀಟ್ ಮಾಡಿರುವ ಬಿಜೆಪಿ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾಗಿದ್ದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾಯ್ತು, ಈಗ ಬೆಂಗಳೂರಿನ ಛಲವಾದಿ ಪಾಳ್ಯದ ಬಳಿ ಇರುವ ಬೆಲೆಬಾಳುವ 2 ಎಕರೆ ಆಸ್ತಿಯನ್ನು ಅಲ್ಪಸಂಖ್ಯಾತ ಇಲಾಖೆಗೆ ವಹಿಸಲು ಆದೇಶಿಸಿದೆ ಎಂದು ದೂರಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದವರು ಹೆಚ್ಚು ವಾಸಿಸಿರುವ ಪ್ರದೇಶದ ಬೆಲೆ ಬಾಳುವ ಜಾಗವನ್ನು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ವಹಿಸುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂಬುದನ್ನು ತಿಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ಆಗ್ರಹಿಸಿದೆ.
ರಾಜ್ಯದ @INCKarnataka ಸರ್ಕಾರದ ದಲಿತ ವಿರೋಧಿ ಮನಸ್ಥಿತಿಗೆ ಇದಕ್ಕಿಂತ ಮತ್ತೊಂದು ಉದಾಹರಣೆ ಇಲ್ಲ.
ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಾಗಿದ್ದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾಯ್ತು, ಈಗ ಬೆಂಗಳೂರಿನ ಛಲವಾದಿ ಪಾಳ್ಯದ ಬಳಿ ಇರುವ ಬೆಲೆಬಾಳುವ 2 ಎಕರೆ ಆಸ್ತಿಯನ್ನು ಅಲ್ಪಸಂಖ್ಯಾತ ಇಲಾಖೆಗೆ… pic.twitter.com/HYRd0C8qmA
— BJP Karnataka (@BJP4Karnataka) February 29, 2024