ಬೆಳಗಾವಿ: ಮಾಜಿ ಸಚಿವ, ಬಿಜೆಪಿ ಶಾಸಕ ಸಿ.ಟಿ.ರವಿ ಅವರನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲೇ ಪೊಲೀಸರು ಬಂಧಿಸಿರುವ ಕ್ರಮ ಕೋಲಾಹಲಕ್ಕೆ ಕಾರಣವಾಗಿದೆ. ತಮ್ಮ ಬಗ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದರೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಗುರುವಾರ ಬಂಧಿಸಿದ್ದಾರೆ.
ವಿಧಾನ ಪರಿಷತ್ತಿನ ಕಲಾಪ ಅನಿರ್ಧಿಷ್ಠಾವಧಿಗೆ ಮುಂದೂಡಿದ ಬಳಿಕ ಕಾಂಗ್ರೇಸ್ ಸರ್ಕಾರದ “ಗೌರವಾನ್ವಿತ ಮಂತ್ರಿಗಳು”, ಕಾಂಗ್ರೆಸ್ಸಿನ ಶಾಸಕರು ನಡೆಸಿದ ದಾಂಧಲೆಗೆ ವಿಡಿಯೋ – ಆಡಿಯೋ ಸಾಕ್ಷಿ ಇದೆ. ಸರ್ಕಾರದ ಸಚಿವರು ಸುವರ್ಣ ಸೌಧದಲ್ಲಿ ನಡೆಸಿದ ಗೂಂಡಾ ವರ್ತನೆಗೆ ಸಾಕ್ಷ್ಯಾಧಾರವಿದೆ ಅವರ ಮೇಲೆ ಏನು ಕ್ರಮ ಕೈಗೊಳ್ಳುತ್ತಿರಿ ಸನ್ಮಾನ್ಯ… pic.twitter.com/EMfpWgYx2L
— C T Ravi 🇮🇳 ಸಿ ಟಿ ರವಿ (@CTRavi_BJP) December 19, 2024
ಇದಕ್ಕೂ ಮುನ್ನ ಸುವರ್ಣ ವಿಧಾನಸೌಧದಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆಯೂ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರ ಈ ದಾಂದಲೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್ತಿನ ಕಲಾಪ ಅನಿರ್ಧಿಷ್ಠಾವಧಿಗೆ ಮುಂದೂಡಿದ ಬಳಿಕ ಕಾಂಗ್ರೇಸ್ ಸರ್ಕಾರದ “ಗೌರವಾನ್ವಿತ ಮಂತ್ರಿಗಳು”, ಕಾಂಗ್ರೆಸ್ಸಿನ ಶಾಸಕರು ನಡೆಸಿದ ದಾಂಧಲೆಗೆ ವಿಡಿಯೋ – ಆಡಿಯೋ ಸಾಕ್ಷಿ ಇದೆ. ಸರ್ಕಾರದ ಸಚಿವರು ಸುವರ್ಣ ಸೌಧದಲ್ಲಿ ನಡೆಸಿದ ಗೂಂಡಾ ವರ್ತನೆಗೆ ಸಾಕ್ಷ್ಯಾಧಾರವಿದೆ. ಅವರ ಮೇಲೆ ಏನು ಕ್ರಮ ಕೈಗೊಳ್ಳುತ್ತಿರಿ “ನ್ಯಾಯನೀತಿಪರ” ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.
ಸಾಕ್ಷ್ಯಾಧಾರಗಳಿಲ್ಲದ ಸುಳ್ಳುಸುದ್ದಿ ಹಬ್ಬಿಸುವ, ಅಪಪ್ರಚಾರ ಮಾಡುವ ಕೆಲಸ ಮಾಡುವ ಬದಲಾಗಿ ಕ್ಯಾಮರಾದಲ್ಲಿ ದಾಖಲಾಗಿರುವ ಆಧಾರ ಗಮನಿಸಿ ಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಿ ಎಂದು ಸಿ.ಟಿ.ರವಿ ಸಿಎಂ ಅವರನ್ನು ಒತ್ತಾಯಿಸಿದ್ದಾರೆ. ಇದೇ ವೇಳೆ ಅವರು, ವಿಧಾನ ಪರಿಷತ್ತಿನ ವೀಡಿಯೊವೊದನ್ನು ಸಾಮಾಜಿಕ ಜಾಲತಾಣ ‘X’ನಲ್ಲಿ ಹಂಚಿಕೊಂಡಿದ್ದಾರೆ.