ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಆವರಣದಲ್ಲಿ ಆಯೋಜಿಸಲಾಗಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಚಾಲನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೊದಲಾದ ಗಣ್ಯರ ಉಪಸ್ಥಿತಿಯಲ್ಲಿ ಸಮಾವೇಶಕ್ಕೆ ಚಾಲನೆ ನೀಡಲಾಗಿದೆ.
ಬೆಂಗಳೂರಿನಲ್ಲಿ Invest Karnataka 2025 ಹೆಸರಿನಲ್ಲಿ ಮೂರು ದಿನಗಳ ಕಾಲ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜಿತವಾಗಿದೆ. ಈ ಸಮಾವೇಶದಲ್ಲಿ ಪ್ರತಿಷ್ಠಿತ ಕಂಪನಿಗಳೊಂದಿಗೆ ಹೂಡಿಕೆ ಒಪ್ಪಂದ, ವಿಚಾರ ಸಂಕಿರಣ ನಡೆಯಲಿದೆ.