ಅಹ್ಮದಾಬಾದ್: ಐಪಿಎಲ್ ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪ್ರಬಲ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಜಯಭೇರಿ ಭಾರಿಸಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಫೈನಲ್ ಪ್ರವೇಶಿಸಿದೆ.
🎥 Left hander’s delight 😎
Venkatesh Iyer nailing some biggies in Ahmedabad 💥
Watch the match LIVE on @StarSportsIndia and @JioCinema 💻📱 #TATAIPL | #KKRvSRH | #Qualifier1 | #TheFinalCall pic.twitter.com/DxC116Bz65
— IndianPremierLeague (@IPL) May 21, 2024
ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಗೆದ್ದು ಬೀಗಿದೆ. ಸನ್ ರೈಸರ್ಸ್ ಹೈದರಾಬಾದ್ ನೀಡಿದ 160 ರನ್ ಗುರಿಯನ್ನು ಬೆನ್ನಟ್ಟಿದ ಕೋಲ್ಕತಾ ನೈಟ್ ರೈಡರ್ಸ್ ಕೇವಲ 15 ಓವರ್ ನಲ್ಲೇ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿದೆ.
ವೆಂಕಟೇಶ್ ಅಯ್ಯರ್ ಮತ್ತು ನಾಯಕ ಶ್ರೇಯಸ್ ಅಯ್ಯರ್ ಅವರ ರೋಮಾಂಚಕಾರಿ ಆಟ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು.