ಇರಾನ್ ಅದ್ಯಕ್ಷ ಇಬ್ರಾಹಿಂ ರೈಸಿ ಅವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ. ಈ ವರದಿಗಳನ್ನಾಧರಿಸಿ ಇರಾನ್ ಆಡಳಿತ ಕೂಡಾ ಸುದ್ದಯನ್ನು ಅಧಿಕೃತ ಎಂದು ಹೇಳಿದೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿತ್ತು. ಈ ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಹೆಲಿಕಾಪ್ಟರ್‌ನಲ್ಲಿ ಇರಾನ್ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜ್ಅರ್‌ಬೈಜಾನ್ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್‌ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥರು ಗನ್‌ಮ್ಯಾನ್‌ಗಳು ಇದ್ದರು ಎನ್ನಲಾಗಿದೆ.
ನೆರೆಯ ರಾಷ್ಟ್ ಅಝರ್ ಬೈಜಾನ್ನಲ್ಲಿಅಣೆಕಟ್ಟು ಉದ್ಘಾಟಿಸಿ ಸ್ವದೇಶಕ್ಕೆ ಮರಳುತ್ತಿದ್ದ ಸಂದರ್ಭದಲ್ಲಿ ದುರ್ಗಮ ಬೆಟ್ಟದಲ್ಲಿ ಮಂಜು ಮುಸುಕಿದ್ದ ಹವಾಮಾನದಿಂದಾಗಿ ಹೆಲಿಕಾಪ್ಟರ್ ನಾಪತ್ತೆಯಾಗಿತ್ತು. ನಾಪತ್ತೆಯಾದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ ಎನ್ನಲಾಗಿದ್ದು ಅದರಲ್ಲಿದ್ದ ಇರಾನ್ ಅಧ್ಯಕ್ಷ ಸೇರಿ ಎಲ್ಲರೂ ದುರ್ಮರಣಕ್ಕೀಡಾಗಿದ್ದಾರೆ ಎನ್ನಲಾಗಿದೆ.