ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಕೋವಿಶೀಲ್ಡ್ ಹಾಕಿಸಿಕೊಂಡಿರುವವರು ಫ್ರಿಜ್ ನೀರು, ಐಸ್‌ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ.
ಈ ಕುರಿತಂತೆ ತೀವ್ರ ಚರ್ಚೆ ನಡೆಯುತ್ತಿದ್ದು, ಇದೆ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೂಲಕ ಸರ್ಕಾರ ಸ್ಪಷ್ಟನೆ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕೋವಿಡ್ ಸಂದರ್ಭದಲ್ಲಿ ಕೋವಿಶೀಲ್ಡ್ ಹಾಕಿಸಿಕೊಂಡಿರುವವರು ಫ್ರಿಜ್ ನೀರು, ಐಸ್‌ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ ಎಂಬ ಸುಳ್ಳು ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ. ಈ ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸಿ. ಆರೋಗ್ಯ ಇಲಾಖೆಯು ಇಂತಹ ಯಾವುದೇ ಸೂಚನೆಯನ್ನು ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದೆ.
ಕೋವಿಡ್ ಸಂದರ್ಭದಲ್ಲಿ ಕೋವಿಶೀಲ್ಡ್ ಹಾಕಿಸಿಕೊಂಡಿರುವವರು ಫ್ರಿಜ್ ನೀರು, ಐಸ್‌ಕ್ರೀಮ್ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ ಎಂಬ ಸುಳ್ಳು ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ. ಈ ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸಿ. ಆರೋಗ್ಯ ಇಲಾಖೆಯು ಇಂತಹ ಯಾವುದೇ ಸೂಚನೆಯನ್ನು ಹೊರಡಿಸಿಲ್ಲ ಎಂದು ಈ ಮೂಲಕ… pic.twitter.com/XniPRZaM5K
— DIPR Karnataka (@KarnatakaVarthe) May 3, 2024


















































