ಉಡುಪಿ: ಕರ್ನಾಟಕ ಬಿಜೆಪಿಯಲ್ಲಿ ನಾಯಕರೇ ಇಲ್ಲ, ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ಲೇಷಿಸಿದ್ದಾರೆ.
ಉಡುಪಿ ಪ್ರವಾಸ ಸಂದರ್ಭದಲ್ಲಿ ಮಣಿಪಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಸದ್ಯದ ಪರಿಸ್ಥಿತಿಯನ್ನು ನೋಡಿದರೆ ರಾಜ್ಯ ಬಿಜೆಪಿಯಲ್ಲಿ ನಾಯಕರಿಲ್ಲದಂತಾಗಿದೆ ಎಂದಿದ್ದಾರೆ.
ಬಿಜೆಪಿಯಲ್ಲಿ ನಾಯಕರಿಲ್ಲದ ಕಾರಣದಿಂದ ಇಲ್ಲಿಯವರೆಗೆ ಹೊಸ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲಎಂದರು. ಜೆಪಿಯಲ್ಲಿ ಅನೇಕ ನಾಯಕರು ನೋವು ಅನುಭವಿಸಿದ್ದಾರೆ ಮತ್ತು ಅವರಲ್ಲಿ ಅನೇಕರು ಆ ಪಕ್ಷದಿಂದ ಹೊರಬರಲು ಬಯಸುತ್ತಾರೆ. ಬಿಜೆಪಿ ನಾಯಕರು ರಾಜ್ಯದ ವಿವಿಧೆಡೆ ಕಾಂಗ್ರೆಸ್ ಮುಖಂಡರನ್ನು ಸಂಪರ್ಕಿಸುತ್ತಿದ್ದಾರೆ ಎಂದು ಶೆಟ್ಟರ್ ಹೇಳಿದರು.
















































































