ಬೆಂಗಳೂರು: ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ಇದ್ದರೂ ಜ.24ರಂದು ಸಾರಿಗೆ ಬಸ್ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಆಡಳಿತ ಮಂಡಳಿ ತಿಳಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು 24.01.2023ರಂದು ಬೆಳಗ್ಗೆ 11ಗಂಟೆಯಿಂದ ಸಂಜೆ 5.30 ರವರೆಗೆ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಚೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿರದೆ. ಆದರೆ, ಈ ಸಂಬಂಧ ಕೆ ಎಸ್ ಆರ್ ಟಿ ಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ.
ಹಾಗೂ ಕೆ ಎಸ್ ಆರ್ ಟಿ ಸಿ ವ್ಯಾಪ್ತಿಯಲ್ಲಿ ಬಸ್ಸುಗಳ ಕಾರ್ಯಚರಣೆಯು ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಮಂಡಳಿ ಕಾರ್ಯದರ್ಶಿ, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







































































