ಬೆಂಗಳೂರು: ಗಣಿ ಅಕ್ರಮ ಆರೋಪದಲ್ಲಿ ಬಂಧನಕ್ಕೊಳಗಾಗಿ ಸುದೀರ್ಘ ಕಾಲ ಜೈಲುವಾಸ ಅನುಭವಿಸಿದ್ದ ಜನಾರ್ದನ ರೆಡ್ಡಿ ಕಳೆದ ವೇಳೆ ವಿಧಾನಸಭಾ ಚುನಾವಣೆಯಲ್ಲಿ ಬಿಜಪಿ ವಿರುದ್ದ ಸಿಡಿದೆದ್ದು ಪ್ರತ್ಯೇಕ ಪಕ್ಷ ಕಟ್ಟಿ ಸವಾಲಾಗಿದ್ದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆಆರ್‌ಪಿಪಿ ಪಕ್ಷದ ಮೂಲಕ ಗೆದ್ದಿರುವ ಗಾಲಿ ಜನಾರ್ದನ ರೆಡ್ಡಿ, ಇದೀಗ ಬಿಜೆಪಿ ನಾಯಕರ ಜೊತೆಗಿನ ಮುನಿಸನ್ನು ದೂರಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿರುವ ಗಾಲಿ ಜನಾರ್ದನ ರೆಡ್ಡಿ ಬದಲಾದ ನಿರ್ಧಾರವೊಂದರಲ್ಲಿ ಬೆಂಗಳೂರಿನಲ್ಲಿ ಸೋಮವಾರ ತಮ್ಮ ಕೆಆರ್‌ಪಿಪಿ ಪಕ್ಷವನ್ನು ಬಿಜೆಪಿ ಜೊತೆ ವಿಲೀನಗೊಳಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ ನಾಯಕ ಸಿ.ಟಿ. ರವಿ, ಸಂಸದ ಪಿ.ಸಿ. ಮೋಹನ್, ಬಳ್ಳಾರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು, ಸಂಸದ ದೇವೇಂದ್ರಪ್ಪ ಸಮ್ಮುಖದಲ್ಲಿ ಜನಾರ್ದನ ರೆಡ್ಡಿ ಅವರು ಬಿಜೆಪಿಗೆ ಸೇರ್ಪಡೆಯಾದರು. ಬಿ.ಎಸ್.ಯಡಿಯೂರಪ್ಪ, ಬಿ.ವೈ ವಿಜಯೇಂದ್ರ ಅವರು ಜನಾರ್ದನ ರೆಡ್ಡಿ ಹಾಗೂ ಬೆಂಬಲಿಗರನ್ನು ಬಿಜೆಪಿ ಶಾಲು ಹಾಕಿ, ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ, ಮತ್ತು ಪ್ರಮುಖರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ಶ್ರೀ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಅಭಿನಂದನೆಗಳು. pic.twitter.com/nMMmTaK5DC
— P C Mohan (Modi Ka Parivar) (@PCMohanMP) March 25, 2024