ಬೆಂಗಳೂರು: ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆಯ ಹೆಸರಿನಲ್ಲಿ ನಡೆಸಿರುವ ಕಾನೂನು ಉಲ್ಲಂಘನೆಯಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿರುವ ಪ್ರಕರಣದಲ್ಲಿ ಕೂಡಲೇ ಕೇಂದ್ರ ಸಚಿವ ಸಂಪುಟದಿಂದ ಭಗವಂತ ಖೂಬಾರನ್ನು ವಜಾಗೊಳಿಸಬೇಕು ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ರನ್ನು ಬಂಧಿಸಬೇಕೆಂದು ಆಗ್ರಹಿಸಿ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು .
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಂತ್ರಿಗಳೇ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕರೋನಾ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಪೊಲೀಸ್ ಇಲಾಖೆಯಂತೂ ಕಣ್ಣುಮುಚ್ಚಿ ಕೂತಿದೆ, ರಾಜ್ಯ ಸರ್ಕಾರದ ಪರವಾಗಿ ಪೋಲಿಸರು ವರ್ತಿಸುತ್ತಿದ್ದಾರೆ ನೀತಿನಿಯಮಗಳನ್ನು ಪಾಲನೆ ಮಾಡದವರ ವಿರುದ್ದ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ ವಿರೋಧ ಪಕ್ಷಗಳನ್ನು ಗುರಿಯಾಗಿಸಿ ಪೋಲಿಸ್ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ದೂರಿದರು.
ಕೂಡಲೇ ಪೊಲೀಸ್ ಇಲಾಖೆ ಪಕ್ಷಪಾತ ಧೋರಣೆಯನ್ನು ಕೈ ಬಿಟ್ಟು ಭಯದ ವಾತಾವರಣ ಸೃಷ್ಟಿಸಿದವರನ ವಿರುದ್ದ ಕ್ರಮ ಕೈಗೊಳ್ಳಲೇಬೇಕು ಎಂದು ಒತ್ತಾಯಿಸಿದರು.
ಗಾಳಿಯಲ್ಲಿ ಗುಂಡು ಹಾರಿಸಲು ಉತ್ತೇಜನ ನೀಡಿರುವ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ನನ್ನು ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ರನ್ನು ಕೂಡಲೇ ಬಂಧಿಸಬೇಕು ಹಾಗೂ ಸೂಕ್ತ ಕ್ರಮಕೈಗೊಳ್ಳದೇ ಹೋದರೆ ರಾಜ್ಯದ ಪೊಲೀಸರಿಗೆ ಇದು ಕಪ್ಪುಚುಕ್ಕೆ ಎಂಬುದನ್ನು ಪೊಲೀಸ್ ಇಲಾಖೆ ಅರ್ಥೈಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಹೇಳಿದರು.