ಬೆಂಗಳೂರು: ಕೆಲ ದಿನಗಳ ಹಿಂದೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಮನೆಯನ್ನೇ ಬಡವತಿಗೆ ದಾನ ಮಾಡಿ ಭಾರೀ ಸುದ್ದಿಯಾಗಿದ್ದ ಸಾಮಾಜಿಕ ಕಾರ್ಯಕರ್ತ, ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಇದೀಗ ‘ಭಾರತ ಗೌರವ ಪ್ರಶಸ್ತಿ’ ಸಿಕ್ಕಿದೆ.
ಆರು ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಉದ್ಯೋಗ ನೀಡಿರುವ ChefTalk ಕಂಪನಿಯ ಮಾಲೀಕರಾದ ಗೋವಿಂದ ಬಾಬು ಪೂಜಾರಿ ಅವರು ಕೊರೋನಾ ಸಂಕಟ ಕಾಲದಲ್ಲಿ 8 ಸಾವಿರಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಆಹಾರ, ವೈದ್ಯಕೀಯ ಸಾಮಾಗ್ರಿಗಳನ್ನೊಳಗೊಂಡ ಕಿಟ್ ನೀಡಿದ್ದಾರೆ. ಕರಾವಳಿ, ಬೆಂಗಳೂರು, ಮಲೆನಾಡು ಸಹಿತ ವಿವಿಧ ಜಿಲ್ಲೆಗಳಲ್ಲಿ ಅವರು ಈ ಸೇವೆ ಮಾಡಿದ್ದಾರೆ.
ಕೊರೋನಾ ವಾರಿಯರ್ಸ್ ಹಾಗೂ ನಾಡಿನ ಸಾಧಕರಿಗಾಗಿ ಏರ್ಪಡಿಸಿರುವ ಅಭಿನಂದನಾ ಸಮಾರಂಭದಲ್ಲಿ ಗೋವಿಂದ ಬಾಬು ಪೂಜಾರಿ ಅವರಿಗೆ ‘ಭಾರತ ಗೌರವ ಪ್ರಶಸ್ತಿ’ ನೀಡಲಾಗುವುದೆಂದು ಜನ್ಮಭೂಮಿ ಫೌಂಡೇಷನ್ ಪ್ರಮುಖರು ತಿಳಿಸಿದ್ದಾರೆ.